HomeKarnatakaBIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಹಾನಗಲ್ ಜೆ ಎಂ ಎಫ್ ಸಿ ಕೋರ್ಟ್ ಗೆ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಜನವರಿ 8ರಂದು ಹಾನಗಲ್ ನಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಪ್ರಕರಣ ಸಂಬಂಧ 19 ಆರೋಪಿಗಳನ್ನು ಹಾನಗಲ್ ಪೊಲೀಸರು ಬಂಧಿಸಿದ್ದರು.

ಅತ್ಯಾಚಾರ ನಡೆಸಿದ್ದಾರೆ ಎನ್ನಲಾದ 7 ಆರೋಪಿಗಳು ಸೇರಿ ಒಟ್ಟು 19 ಆರೋಪಿಗಳ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ವಿಚಾರಣೆ ವೇಳೆ 7 ಆರೋಪಿಗಳನ್ನು ಸಂತ್ರಸ್ತೆ ಗುರುತಿಸಿದ್ದಾರೆ. ಘಟನೆ ಬಗ್ಗೆ ತನಿಖೆಯನ್ನು ಪೊಲೀಸರು 20 ದಿನಗಳ ಹಿಂದೆಯೇ ಪೂರ್ಣಗೊಳಿಸಿದ್ದಾರೆ. ಆದರೆ ಎಫ್ ಎಸ್ ಎಲ್ ವರದಿ ಹಾಗೂ ಡಿಎನ್ ಎ ವರದಿಗಾಗಿ ಕಾಯುತ್ತಿದ್ದರು. ಇದೀಗ ವರದಿ ಸಿಕ್ಕ ಹಿನ್ನೆಲೆಯಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular