HomeKarnatakaBREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಪಟ್ಟು : ಜ.20...

BREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಪಟ್ಟು : ಜ.20 ರಂದು ಹಾವೇರಿಯಲ್ಲಿ ‘ಬಿಜೆಪಿ’ ಪ್ರತಿಭಟನೆ

ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿದ್ದು, ಜ.20 ರಂದು ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಹಾವೇರಿಯಲ್ಲಿ ಎಸ್ ಪಿ ಕಚೇರಿಯ ಮುಂದೆ ಮಾಜಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಬಿಜೆಪಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular