HomeKarnatakaBIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಧೈರ್ಯ ತುಂಬಿದರು.

ಹಾವೇರಿ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಸಂತ್ರಸ್ತೆಯ ಕುಟುಂಬ ಸದಸ್ಯರು ಭೇಟಿಯಾಗಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಾಗೂ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ಪ್ರಕರಣದ ತನಿಖೆ ಚುರುಕುಗೊಂಡಿದೆ. ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ತಮ್ಮದೇ ಸಮುದಾಯದ ಹೆಣ್ಣುಮಗಳ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಯಾವುದೇ ಧರ್ಮದವರಾಗಿರಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ. ಅಪರಾಧಿಗಳಿಗೆ ಕಠಿಣೆ ಶಿಕ್ಷೆ ಕೊಡಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದಲ್ಲಿ ಯಾರನ್ನೂ ರಕ್ಶಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular