ದುಬೈ: ಏಷ್ಯಾಕಪ್ ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿಯೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನ ನಾಯಕ ಸಲ್ಮಾನ್ ಆಗಾ ಅವರಿಗೆ ಹ್ಯಾಂಡ್ ಶೇಕ್ ಮಾಡಿಲ್ಲ. ಸೇನಾ ಮತ್ತು ರಾಜಕೀಯ ಸಂಘರ್ಷದ ಕಾರಣದಿಂದಾಗಿ ಏಷ್ಯಾ ಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಳೆದ ಪಂದ್ಯದಲ್ಲಿ ಭಾರತ ತಂಡ ಪ್ರತಿಸ್ಪರ್ಧಿ ಪಾಕಿಸ್ತಾನ ತಂಡದ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ಮಾಡದೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಭಾನುವಾರವೂ ಕೂಡ ಹ್ಯಾಂಡ್ ಶೇಕ್ ಮಾಡದೆ ತನ್ನ ನಿಲುವಿಗೆ ಭಾರತೀಯ ಆಟಗಾರರು ಬದ್ಧವಾಗಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್(w), ಸೂರ್ಯಕುಮಾರ್ ಯಾದವ್(c), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ಪಾಕಿಸ್ತಾನ ತಂಡ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸಲ್ಮಾನ್ ಅಘಾ(ಸಿ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್(w), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.