ಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ ಕಾರಣಕ್ಕೆ ಹಲ್ಲೆಗೊಳಗಾದ ಯುವಕನನ್ನೇ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.
ಏನಿದು ಘಟನೆ..?
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕ ಮುಕೇಶ್) ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಅರೆಸ್ಟ್ ಆದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಂಗಡಿ ಮಾಲೀಕ ಮುಕೇಶ್ ಕೂಡ ಪ್ರತಿಭಟನೆಗೆ ಮುಂದಾಗಿದ್ದು, ನೀತಿ ಸಂಹಿತೆ ಕಾರಣ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಮುಕೇಶ್ ನನ್ನೇ ವಶಕ್ಕೆ ಪಡೆದುಕೊಂಡರು. ಇನ್ನೂ, ಪ್ರತಿಭಟನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸುರೇಶ್ ಕುಮಾರ್ ಮತ್ತಿತರರು ಸಾಥ್ ನೀಡಿದರು.

