ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ: ಎರಡು ದಿನ ಮದ್ಯ ಮಾರಾಟ ನಿಷೇಧಿಸಿ ಕೊಪ್ಪಳ ಡಿಸಿ ಆದೇಶ

ಕೊಪ್ಪಳ: ಗಂಗಾವತಿ ನಗರದಲ್ಲಿ ಡಿಸೆಂಬರ್ 3 ರಂದು ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.

ಈ ನಿಮಿತ್ತ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 2 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 3 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಗಂಗಾವತಿ ನಗರದಲ್ಲಿ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಿಮಿತ್ತ ಪವಮಾನ ಹೋಮ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆ, ನೆರೆ ರಾಜ್ಯಗಳಾದ ಮಹಾರಾಷ್ಟç, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಾವಿರಾರು ಜನ ಭಕ್ತರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ.

ಆದೇಶದನ್ವಯ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಬೇಕು. ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read