HomeLatest NewsBREAKING : ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗಲು ಯತ್ನ : ತಳ್ಳಾಟ, ನೂಕಾಟ.!

BREAKING : ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗಲು ಯತ್ನ : ತಳ್ಳಾಟ, ನೂಕಾಟ.!

ಮಂಡ್ಯ : ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ್ದು, ತಳ್ಳಾಟ ನೂಕಾಟ ನಡೆದಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸಂಕೀರ್ತನಾ ಯಾತ್ರೆ ವೇಳೆ ಈ ಘಟನೆ ನಡೆದಿದೆ.
ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ಸ್ಥಳದಲ್ಲಿ ತಳ್ಳಾಟ- ನೂಕಾಟ ನಡೆದಿದೆ. ಜಾಮೀಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಕೆಲವರು ಘೋಷಣೆ ಕೂಗಿದ್ದಾರೆ.

ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದೆ. ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇಗುಲ ಮರು ಸ್ಥಾಪನೆ ಸಂಕಲ್ಪದೊಂದಿಗೆ, ನಿಮಿಷಾಂಬ ದೇಗುಲದಿಂದ ಜಾಮಿಯಾ ಮಸೀದಿ ಮುಂಭಾಗದ ರಂಗನಾಥಸ್ವಾಮಿ ದೇಗುಲದ ತನಕ ಯಾತ್ರೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀರಂಗಪಟ್ಟಣದಲ್ಲಿ ಇರುವ ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಇತ್ತು. ಆ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದ ಎನ್ನಲಾಗಿದೆ., ಮೈಸೂರು, ಕೊಡಗು, ಹಾಸನ, ರಾಮನಗರ ಸೇರಿ ವಿವಿಧ ಜಿಲ್ಲೆಗಳಿಂದ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular