HomeKarnatakaಹನೂರು ಎನ್ ಕೌಂಟರ್ ಪ್ರಕರಣ: ತನಿಖೆಗೆ ಸಿಐಡಿ ನಾಲ್ಕು ತಂಡಗಳ ರಚನೆ

ಹನೂರು ಎನ್ ಕೌಂಟರ್ ಪ್ರಕರಣ: ತನಿಖೆಗೆ ಸಿಐಡಿ ನಾಲ್ಕು ತಂಡಗಳ ರಚನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ಯಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಗುಂಡೆಟಿಗೆ ಮೂವರು ಬಲಿಯಾದ ಹನೂರು ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ.

ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಇಬ್ಬರು ಡಿವೈಎಸ್ಪಿಗಳು ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಈ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಸಿಐಡಿ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್‌ಕೌಂಟರ್ ಹಾಗೂ ಹನೂರು, ರಾಮಾಪುರ, ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು ನಾಲ್ಕು ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸಲಿದೆ. ಈ ಕುರಿತು ಸ್ಥಳೀಯ ಪೊಲೀಸರು ಈಗಾಗಲೇ ಸಿಐಡಿಗೆ ಕೇಸ್ ಫೈಲ್ ಹಸ್ತಾಂತರಿಸಿದ್ದಾರೆ. ಡಿವೈಎಸ್ಪಿ ಸತೀಶ್ ಚಿಟಗುಬ್ಬಿ, ಡಿವೈಎಸ್ಪಿ ಡಿ.ಎಸ್. ರಾಜೇಂದ್ರ, ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಪಿ. ಗೋಪಾಲ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಚ್.ಎನ್. ಹೊನ್ನಪ್ಪ ಅವರ ನೇತೃತ್ವದಲ್ಲಿ ಸಿಐಡಿಯ ನಾಲ್ಕು ತಂಡಗಳು ತನಿಖೆ ಕೈಗೊಳ್ಳಲಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular