ರಜನಿ ಅಭಿಮಾನಿಗಳಿಗೆ ಸೂಪರ್ ಸುದ್ದಿ : ‘ಜೈಲರ್’ ಚಿತ್ರ ‘OTT’ ಗೆ ಬರುವ ಡೇಟ್ ಫಿಕ್ಸ್ ಆಯ್ತು..!

ಸೂಪರ್ ಸ್ಟಾರ್ ರಜನಿಕಾಂತ್ ಅವರ ಇತ್ತೀಚಿನ ಬ್ಲಾಕ್ ಬಸ್ಟರ್ ‘ಜೈಲರ್’ ಚಿತ್ರ ಒಟಿಟಿಗೆ ಬರುವ ಡೇಟ್ ಫಿಕ್ಸ್ ಆಗಿದ್ದು, ಅಭಿಮಾನಿಗಳಿಗೆ ಸೂಪರ್ ಸುದ್ದಿ ಸಿಕ್ಕಿದೆ.

ಹೌದು. . ರಜನಿ ಅವರ ಜೈಲರ್ ಚಲನಚಿತ್ರವು ಇಂದು ಮಧ್ಯರಾತ್ರಿಯಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಾಗಲಿದೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಜೈಲರ್ ಪ್ರಸಾರವಾಗಲಿದೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಆಕ್ಷನ್-ಡ್ರಾಮಾದಲ್ಲಿ ಕನ್ನಡದ ಸ್ಟಾರ್ ಶಿವರಾಜ್ ಕುಮಾರ್ ಮತ್ತು ಮಲಯಾಳಂ ಸ್ಟಾರ್ ಹೀರೋ ಮೋಹನ್ ಲಾಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಜಾಕಿ ಶ್ರಾಫ್, ರಮ್ಯಾ ಕೃಷ್ಣನ್, ತಮನ್ನಾ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕಲಾನಿಧಿ ಮಾರನ್ ನಿರ್ಮಿಸಿದ ಜೈಲರ್ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸೂಪರ್ ಸ್ಟಾರ್ ವೃತ್ತಿಜೀವನದ ಅತಿದೊಡ್ಡ ಹಿಟ್ ಆಗಿರುವ ಈ ಚಿತ್ರದ ಒಟಿಟಿ ಬಿಡುಗಡೆಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.. ಕೆಲವು ದಿನಗಳ ಹಿಂದೆ ಜೈಲರ್ ಆನ್ ಲೈನ್ ನಲ್ಲಿ ಸೋರಿಕೆಯಾಗಿತ್ತು. ಹೆಚ್ ಡಿ ಪ್ರಿಂಟ್ ಹಲವಾರು ಪೈರಸಿ ವೆಬ್ಸೈಟ್ಗಳಲ್ಲಿ ಕಾಣಿಸಿಕೊಂಡಿದೆ.

https://twitter.com/TeluguDz/status/1699325303586504877?ref_src=twsrc%5Etfw%7Ctwcamp%5Etweetembed%7Ctwterm%5E1699325303586504877%7Ctwgr%5E1a9fcea167563da6975ee61de82abd6c9d89e4a3%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read