ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚಾರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹರ್ ಘರ್ ತಿರಂಗ ಅಭಿಯಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದಾರೆ.
ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಅಮಿತ್ ಶಾ ಪತ್ನಿ ಸೋನಲ್ ಶಾ ಜೊತೆಗೂಡಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು.
ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ಪ್ರಾರಂಭಿಸಲಾದ ಹರ್ ಘರ್ ತಿರಂಗಾ ಅಭಿಯಾನದ 4ನೇ ಆವೃತ್ತಿಯನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ದೇಶಾದ್ಯಂತ ನಾಗರಿಕರು ರಾಷ್ಟ್ರಧ್ವಜ ತಿರಂಗವನ್ನು ಮನೆ ಮೇಲೆ ಹಾರಿಸುವಂತೆ ಪ್ರೇರೇಪಿಸಿತ್ತು.