HomeIndiaHar Ghar Tiranga : ಪ್ರಧಾನಿ ಮೋದಿ ಕರೆಗೆ ಭರ್ಜರಿ ರೆಸ್ಪಾನ್ಸ್ : '88 ಮಿಲಿಯನ್...

Har Ghar Tiranga : ಪ್ರಧಾನಿ ಮೋದಿ ಕರೆಗೆ ಭರ್ಜರಿ ರೆಸ್ಪಾನ್ಸ್ : ’88 ಮಿಲಿಯನ್ ಸೆಲ್ಫಿ’ ಅಪ್ ಲೋಡ್

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಚಳವಳಿಯಲ್ಲಿ ಭಾಗವಹಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದರು.

ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ , ತ್ರಿವಣ ಧ್ವಜಗಳ ಡಿಪಿಯನ್ನು ಹಾಕೋಣ .ನಮ್ಮ ಪ್ರೀತಿಯ ದೇಶ ಮತ್ತು ನಮ್ಮ ನಡುವಿನ ಬಂಧವನ್ನು ಆಳಗೊಳಿಸುವ ಈ ವಿಶಿಷ್ಟ ಪ್ರಯತ್ನಕ್ಕೆ ಬೆಂಬಲ ನೀಡೋಣ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಪ್ರಧಾನಿ ಮೋದಿ ನೀಡಿದ ಕರೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ’88 ಮಿಲಿಯನ್ ಸೆಲ್ಫಿ’ ಅಪ್ ಲೋಡ್ ಆಗಿದೆ. ರಾಷ್ಟ್ರಧ್ವಜದೊಂದಿಗೆ 88 ದಶಲಕ್ಷಕ್ಕೂ ಹೆಚ್ಚು ಜನರ ಸೆಲ್ಪಿಗಳನ್ನು ಕೇಂದ್ರ ಸರ್ಕಾರದ ಹರ್ ತಿರಂಗಾ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ.

ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾನೆ ಮತ್ತು ಇದು ರಾಷ್ಟ್ರೀಯ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ #HarGharTiranga ಆಂದೋಲನದಲ್ಲಿ ಭಾಗವಹಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ. ತಿರಂಗಾದೊಂದಿಗೆ ನಿಮ್ಮ ಫೋಟೋಗಳನ್ನು … https://harghartiranga.com” ನಲ್ಲಿ ಅಪ್ಲೋಡ್ ಮಾಡಿ ಎಂದು ಪ್ರಧಾನಿ ಹೇಳಿದ್ದರು. ಪ್ರಧಾನಿ ಮೋದಿ ನೀಡಿದ ಕರೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular