HomeCrimeನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರಾಮದ ಬಾಲಕಿಯ ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿದ್ದ 24 ವರ್ಷದ ಆರೋಪಿ ನೀರು ತರಲು ಬಾಲಕಿ ಅಡುಗೆ ಮನೆಗೆ ಹೋದಾಗ ಹಿಂದಿನಿಂದ ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಕಿರುಚಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ತಲೆಮರಿಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಯುವಕನ ದುಷ್ಕೃತ್ಯ ಖಂಡಿಸಿ ಗ್ರಾಮದ ಜನ ಸಾಗರ ಡಿ.ವೈ.ಎಸ್.ಪಿ. ಕಚೇರಿಗೆ ಆಗಮಿಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular