HomeKarnatakaಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಖಾಸಗಿ ಶಾಲೆಯ ಮಾಜಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಲೈಂಗಿಕ ಕಿರುಕುಳ ಆರೋಪದಡಿ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ದೂರು ನೀಡಿದ್ದು, ಖಾಸಗಿ ಶಾಲೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ತ್ಯಾಗರಾಜನಗರದ ಖಾಸಗಿ ಶಾಲೆಯಲ್ಲಿ ಮೂರು ವರ್ಷ ಶಿಕ್ಷಕಿಯಾಗಿ ಕೆಲಸ ಮಾಡಿದ್ದು, ಶಾಲೆಗೆ ಗುರಪ್ಪನಾಯ್ಡು ಅಧ್ಯಕ್ಷರಾಗಿದ್ದಾರೆ. 75 ಅಧಿಕ ಶಿಕ್ಷಕಿಯರು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ಬಹುತೇಕರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದವರು. ಕೆಲವು ಸಿಬ್ಬಂದಿ ತಮ್ಮ ಮಕ್ಕಳನ್ನು ಈ ಶಾಲೆಯಲ್ಲಿ ಓದಿಸುತ್ತಿದ್ದಾರೆ.

ಗುರಪ್ಪನಾಯ್ಡು ವಿಕೃತ ಕಾಮಿಯಾಗಿದ್ದು, ಹೆಣ್ಣು ಮಕ್ಕಳನ್ನು ಕಂಡರೆ ಬಿಡುವುದಿಲ್ಲ. ಅಶ್ಲೀಲ ವಿಡಿಯೋ ಮಾಡಿಕೊಂಡು ಬೆದರಿಸುತ್ತಾರೆ. ಹೇಳಿದಂತೆ ಕೇಳದಿದ್ದರೆ ವಿಡಿಯೋಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸುತ್ತಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಅನೇಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಬಡ ಕುಟುಂಬಕ್ಕೆ ಸೇರಿದ ಹೆಣ್ಣು ಮಕ್ಕಳು ಈ ವಿಚಾರವನ್ನು ಯಾರ ಬಳಿಯೂ ಹೇಳಿಕೊಳ್ಳದೆ ಚಿತ್ರ ಹಿಂಸೆ ಅನುಭವಿಸುತ್ತಿದ್ದಾರೆ. ಈತನ ವಿರುದ್ಧ ದೂರು ನೀಡಿದರೆ ನಮ್ಮದೇ ಮರ್ಯಾದೆ ಹೋಗುತ್ತದೆ ಎಂದು ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲವೆಂದು ನೊಂದ ಶಿಕ್ಷಕಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021 ರಿಂದ 23ರ ವರೆಗೆ ಶಿಕ್ಷಕಿಯಾಗಿ ಕೆಲಸ ಮಾಡಿದ್ದು, ಉದ್ದೇಶಪೂರ್ವಕವಾಗಿ ಗುರಪ್ಪನಾಯ್ಡು ಕಚೇರಿಗೆ ಕರೆಸಿಕೊಂಡು ಅಸಭ್ಯವಾಗಿ ಮಾತನಾಡುವುದು, ಸ್ಪರ್ಶಿಸುವುದು ಸೇರಿ ಅನೇಕ ರೀತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular