ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅರ್ಜುನ ಹನುಮಂತಪ್ಪ ಶಿಕ್ಷೆಗೊಳಗಾದ ವ್ಯಕ್ತಿಯಾಗಿದ್ದಾನೆ. ನ್ಯಾಯಾಧೀಶರಾದ ನಿಂಗನಗೌಡ ಪಾಟಿಲ ಅವರು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ದಂಡದ ಮೊತ್ತದಲ್ಲಿ ನೊಂದ ಬಾಲಕಿಗೆ 80 ಸಾವಿರ ರೂ. ಪರಿಹಾರ ನೀಡಬೇಕು. ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿಯಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಲಾಗಿದೆ.

ಅರ್ಜುನ ಹನುಮಂತಪ್ಪ 2021ರ ಜೂನ್ 7ರಂದು ಬೈಕ್ ನಲ್ಲಿ ಬಾಲಕಿಯನ್ನು ಅಪಹರಿಸಿ ಗುತ್ತೂರ ಗ್ರಾಮದ ಮನೆಯೊಂದರಲ್ಲಿ ಜೂನ್ 8 ರಿಂದ 15ರವೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾವೇರಿ ಉಪವಿಭಾಗದ ಸಿಪಿಐ ಚಿದಾನಂದ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಪಾಟೀಲ ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read