HomeKarnatakaBREAKING NEWS: ಬಾಲಕಿಯರನ್ನು ಕಟ್ಟಿ ಹಾಕಿ ಹಲ್ಲೆ , ವೇಶ್ಯಾವಾಟಿಕೆಗೆ ಸಹಕರಿಸಲು ಕಿರುಕುಳ: ಅಧಿಕಾರಿಗಳ ವಿರುದ್ಧ...

BREAKING NEWS: ಬಾಲಕಿಯರನ್ನು ಕಟ್ಟಿ ಹಾಕಿ ಹಲ್ಲೆ , ವೇಶ್ಯಾವಾಟಿಕೆಗೆ ಸಹಕರಿಸಲು ಕಿರುಕುಳ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸರ್ಕಾರಿ ಬಾಲ ಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲಾಗಿದೆ. ಸರ್ಕಾರಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ಬಾಲಕಿಯರಿಗೆ ಕಿರುಕುಳ ನೀಡಲಾಗಿದೆ.

ಬಾಲಕೀರನ್ನು ಕಟ್ಟಿ ಹಾಕಿ ದೈಹಿಕವಾಗಿ ಹಲ್ಲೆ ಮಾಡಿ, ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ವೇಶ್ಯಾವಾಟಿಕೆಗೆ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಘಟನೆ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸೇರಿದ ಬಾಲಮಂದಿರ ಇದಾಗಿದೆ. ಅಧೀಕ್ಷಕಿ, ಸಹಾಯಕಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ವರ್ಷದ ಇಬ್ಬರು ಬಾಲಕಿಯರ ಮೇಲೆ ಕೃತ್ಯವೆಸಗಿರುವುದು ಸಾಬೀತಾಗಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಮತ್ತು ನ್ಯಾಯಾಧೀಶರ ಸೂಚನೆ ಮೇರೆಗೆ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular