HomeKarnatakaವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲ ವಶಕ್ಕೆ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲ ವಶಕ್ಕೆ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರೊಬ್ಬರನ್ನು ಹಾಸನ ಜಿಲ್ಲೆ ಅರಕಲಗೂಡು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಶುಕ್ರವಾರ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಇಂದಿರಾ ಅವರು ವಿದ್ಯಾರ್ಥಿನಿಯರ ಹೇಳಿಕೆ ಪಡೆದು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular