ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕರು, ಕಾವಲುಗಾರರು, ಪ್ರಾಂಶುಪಾಲೆ ವಶಕ್ಕೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ವಸತಿ ನಿಲಯ ಒಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಪ್ರತಿಭಟನೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ, ಇಬ್ಬರು ಶಿಕ್ಷಕರು, ಇಬ್ಬರು ಕಾವಲುಗಾರರನ್ನು ವಶಕ್ಕೆ ಪಡೆಯಲಾಗಿದೆ.

ವಿದ್ಯಾರ್ಥಿನಿಯರ ಪ್ರತಿಭಟನೆಯ ನಂತರ ವಸತಿ ನಿಲಯಕ್ಕೆ ಶಾಸಕ ಲಿಂಗೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಪಿಎಸ್ಐಗಳಾದ ಆಶಾ, ಮಧು, ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದ ಕುರಿತು 10ನೇ ತರಗತಿಯ ಮೂವರು ಮತ್ತು 7ನೇ ತರಗತಿಯ ಐವರು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಪರಿಶೀಲನೆ ಬಳಿಕ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read