HomeKarnatakaವಿದ್ಯಾರ್ಥಿನಿ ಪುಸಲಾಯಿಸಿ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ: ಶಿಕ್ಷಕನ ಹಿಡಿದು ಕೊಟ್ಟ ಗ್ರಾಮಸ್ಥರು

ವಿದ್ಯಾರ್ಥಿನಿ ಪುಸಲಾಯಿಸಿ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ: ಶಿಕ್ಷಕನ ಹಿಡಿದು ಕೊಟ್ಟ ಗ್ರಾಮಸ್ಥರು

ಮೈಸೂರು: ಹುಣಸೂರು ತಾಲೂಕಿನ ಸರ್ಕಾರಿ ಶಾಲೆಯೊಂದರ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮಾಜಿ ಅತಿಥಿ ಶಿಕ್ಷಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ರವಿ(42) ಬಂಧಿತ ಆರೋಪಿ. ವಿವಾಹಿತನಾಗಿರುವ ಆರೋಪಿ ರವಿ ಶಾಲೆಯಲ್ಲಿ ಹಿಂದೆ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು, ಕೆಲಸ ಬಿಟ್ಟ ಬಳಿಕ ಗ್ರಾಮ ಒನ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಶನಿವಾರ ಮಧ್ಯಾಹ್ನದ ಬಳಿಕ ವಿದ್ಯಾರ್ಥಿನಿಯನ್ನು ಹಿರಿಯ ಪ್ರಾಥಮಿಕ ಶಾಲೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ವಿಷಯ ತಿಳಿದು ಅಲ್ಲಿಗೆ ಬಂದ ಬಾಲಕಿಯ ಸಹೋದರ ಮತ್ತು ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯ ತಾಯಿ ಹಾಗೂ ಬಿಇಒ ಹುಣಸೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಶಾಲೆಗೆ ಪೊಲೀಸ್ ಇನ್ಸ್ ಪೆಕ್ಟರ್ ಮುನಿಸ್ವಾಮಿ, ಬಿಇಒ ಮಹದೇವ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಾಜಿ ಅತಿಥಿ ಶಿಕ್ಷಕನಿಗೆ ಶಾಲೆಯ ಬೀಗ ಸಿಕ್ಕಿದ್ದು ಹೇಗೆ? ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಮುಖ್ಯ ಶಿಕ್ಷಕ ಬಿ.ಎಂ. ಸತೀಶ್ ಕರ್ತವ್ಯ ಲೋಪ ಎಸಗಿದ ಆರೋಪ ಕೇಳಿ ಬಂದಿದೆ. ಮುಖ್ಯ ಶಿಕ್ಷಕನ ವಿರುದ್ಧವೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular