HomeKarnatakaಶಾಲೆಯಲ್ಲೇ ಶಿಕ್ಷಕನಿಂದ ಮಾನಗೇಡಿ ಕೃತ್ಯ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಶಾಲೆಯಲ್ಲೇ ಶಿಕ್ಷಕನಿಂದ ಮಾನಗೇಡಿ ಕೃತ್ಯ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೀದರ್: ಪ್ರೌಢಶಾಲೆ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೂನ್ 28ರಂದು ವಿದ್ಯಾರ್ಥಿನಿ ಒಬ್ಬಳೇ ಶಾಲೆಯ ತರಗತಿಯಲ್ಲಿದ್ದಾಗ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ತಂದೆಗೆ ವಿಷಯ ತಿಳಿಸಿದ್ದು, ಅವರು ಸೋಮವಾರ ಶಾಲೆಗೆ ಆಗಮಿಸಿ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿತ ಶಿಕ್ಷಕ ಮತ್ತು ಆತನಿಗೆ ಬೆಂಬಲವಾಗಿ ನಿಂತು ಬಾಲಕಿ ಕುಟುಂಬದವರಿಗೆ ಬೆದರಿಕೆ ಹಾಕಿದ್ದ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಡಿಡಿಪಿಐ ಮತ್ತು ಕಮಲನಗರ ಡಿವೈಎಸ್ಪಿ ಜೊತೆ ಚರ್ಚೆ ನಡೆಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular