ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಮನವಿಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾಯಕೊಂಡ ರೈಲ್ವೆ ನಿಲ್ದಾಣದಲ್ಲಿ ಸಿದ್ದಗಂಗಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಹಾಗೂ ವಿಶ್ವಮಾನವ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವಂತೆ, ಹರಿಹರ–ಚಿತ್ರದುರ್ಗ ಪ್ರಯಾಣಿಕ ರೈಲು ಸೇವೆಯನ್ನು ಪುನರಾರಂಭಿಸುವಂತೆ ಹಾಗೂ ಹನುಮನಹಳ್ಳಿ ಗ್ರಾಮ ರೈಲ್ವೆ ಗೇಟ್ ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ವಿಸ್ತರಣೆ, ಶೌಚಾಲಯ, ಆಸನ ವ್ಯವಸ್ಥೆ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಸಾರ್ವಜನಿಕ ಮೂಲಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಯಿತು.
ಜೊತೆಗೆ, ಬೆಂಗಳೂರು–ಹುಬ್ಬಳ್ಳಿ–ಮಿರಜ್–ಅಮೃತಸರ–ವೈಷ್ಣೋದೇವಿ ಕತ್ರಾ ಮಾರ್ಗವಾಗಿ ಕರ್ನಾಟಕದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದೂರ ಪ್ರಯಾಣದ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸುವಂತೆ ಹಾಗೂ ಕರ್ನಾಟಕದಿಂದ ಶ್ರೀಶೈಲಕ್ಕೆ ನೇರ ರೈಲು ಸಂಪರ್ಕ ಕಲ್ಪಿಸುವಂತೆ ಸಹ ಮನವಿ ಸಲ್ಲಿಸಲಾಯಿತು.

