ಅಕ್ರಮ ಮರಳು ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಾಸಕನಿಗೆ ಜೀವ ಬೆದರಿಕೆ

ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.

ದಾವಣಗೆರೆ ನಗರದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಶಾಸಕ ಹರೀಶ್ ಬೆಳಗಿನ ವಾಯುವಿಹಾರ ಮುಗಿಸಿಕೊಂಡು ಜಿಲ್ಲಾ ಆಸ್ಪತ್ರೆ ಎದುರಿನ ಕಾಫಿ ಬಾರ್ ಬಳಿ ಬಂದಿದ್ದ ವೇಳೆ ಅಮರಾವತಿ ಮಂಜುನಾಥ್ ಬೆದರಿಕೆ ಹಾಕಿದ್ದಾರೆ.

ಮರಳು ಗಣಿಗಾರಿಕೆ ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಿದ್ದೀಯಾ, ಯಾವ ಧೈರ್ಯದಿಂದ ಹರಿಹರಕ್ಕೆ ಬರುತ್ತೀಯಾ, ನಿನ್ನನ್ನು ಉಳಿಸುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಾಸಕ ಹರೀಶ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಚಿಕ್ಕಬಿದರೆ, ಹರಪನಹಳ್ಳಿ ತಾಲೂಕಿನ ವಟ್ಲಹಳ್ಳಿ ಸಮೀಪ ತುಂಗಭದ್ರ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಶಾಸಕ ಹರೀಶ್ ದೂರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read