HomeKarnatakaಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆಯ ಕಂದಾಯ ಅಧಿಕಾರಿ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಂದಾಯ ಅಧಿಕಾರಿ ರಮೇಶ್, ಪ್ರಥಮ ದರ್ಜೆ ಸಹಾಯಕ ನಾಗೇಶ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

4 ವರ್ಷಗಳಿಂದ ಶ್ರೀದೇವಿ ಪೆಟ್ರೋಲ್ ಬಂಕ್ ಸೈಟ್ ಕಂದಾಯ ಕಟ್ಟಿರಲಿಲ್ಲ. ಕಂದಾಯದ ಮೊತ್ತ ಕಡಿಮೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಸೈಟ್ ಮಾಲೀಕ ನಾಗೇಶ್ ನಿಂದ 20 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular