HomeKarnatakaಹರಿಯಾಣದಲ್ಲಿ 3ನೇ ಬಾರಿ ಬಿಜೆಪಿ ಅಧಿಕಾರದತ್ತ: ವಿಪಕ್ಷಗಳಿಗೆ ಮತದಾರರು ಉತ್ತರ ನೀಡಿದ್ದಾರೆ: ಬಿ.ವೈ. ವಿಜಯೇಂದ್ರ

ಹರಿಯಾಣದಲ್ಲಿ 3ನೇ ಬಾರಿ ಬಿಜೆಪಿ ಅಧಿಕಾರದತ್ತ: ವಿಪಕ್ಷಗಳಿಗೆ ಮತದಾರರು ಉತ್ತರ ನೀಡಿದ್ದಾರೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿ ಈಬಾರಿ ಧೂಳಿಪಟವಾಗಲಿದೆ ಎಂದು ಬೊಬ್ಬೆ ಹಾಕುತ್ತಿದ್ದ ವಿಪಕ್ಷಗಳಿಗೆ ಫಲಿತಾಂಶ ಉತ್ತರ ನೀಡಿದೆ. ಬಿಜೆಪಿ ಗೆಲುವಿನತ್ತ ದಾಪುಗಾಲಿಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಇದು ಸಂತಸದ ವಿಚಾರ. ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಮತದಾರರು ಉತ್ತರ ನೀಡಿದ್ದಾರೆ ಎಂದರು.

ಇದೇ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಸಮೀಕ್ಷೆ ಹಾಗೂ ಫಲಿತಾಂಶಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಮೋದಿ ಅವರ ಕೆಲಸ, ವರ್ಚಸ್ಸು ಈ ಗೆಲುವು ತಂದಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular