HomeKarnatakaಹರಿಯಾಣದಲ್ಲಿ ಕಾಂಗ್ರೆಸ್ ಗೆ ಸೋಲು: ಮತದಾರರ ತೀರ್ಪು ಒಪ್ಪುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸೋಲು: ಮತದಾರರ ತೀರ್ಪು ಒಪ್ಪುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಯಚೂರು: ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿದ್ದು, ಮತದಾರರು ನೀಡಿರುವ ತೀರ್ಪನ್ನು ಗೌರವಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಡಿಸಿಎಂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ. ಕಾಂಗ್ರೆಸ್ ಎಲ್ಲಿ ಎಡವಿದೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.

ಹರಿಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿತ್ತು. ಆದರೆ ಸಾಧ್ಯವಾಗಿಲ್ಲ. ಮತದಾರರು ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಲೇಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular