ALERT : ಇನ್ಮುಂದೆ ‘ವೈದ್ಯರ ಚೀಟಿ’ ಇಲ್ಲದೇ ‘ಔಷಧಿ’ ಕೊಡುವ ಮೆಡಿಕಲ್ ಸ್ಟೋರ್ ಮೇಲೆ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿರುವ ನಮ್ಮ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಔಷಧಿಗಳ ದುರ್ಬಳಕೆಯನ್ನು ತಡೆಗಟ್ಟಲು ವಿಶೇಷ ಅಭಿಯಾನ ನಡೆಸಲಾಗಿದೆ.

ಮೆಡಿಕಲ್ ಸ್ಟೋರ್ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಮಾತ್ರೆಗಳನ್ನು ಕೊಡುತ್ತಿದ್ದಾರೆ, ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಮೇರೆಗೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿರುವ ಅಂಗಡಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಮಾಜಕ್ಕೆ ದೊಡ್ಡ ಪಿಡುಗಾಗಿರುವ ಮಾದಕ ವಸ್ತುಗಳ ನಿರ್ಮೂಲನೆಗೆ ದಿಟ್ಟ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ನಮ್ಮ ಪ್ರಯತ್ನಕ್ಕೆ ನೀವು ಕೈಜೋಡಿಸಿ, ಒಗ್ಗಟ್ಟಾಗಿ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸೋಣ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

https://twitter.com/dineshgrao/status/1837382398553542915

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read