HomeKarnatakaBIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು...

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 341, 323, 393, 427, 504ರ ಅಡಿ ಎಫ್ ಐ ಆರ್ ದಾಖಲಾಗಿದೆ.

ಕಾರು ತೆಗೆಯುವ ವಿಚಾರಕ್ಕೆ ಗಲಾಟೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಪುಲಕೇಶಿನಗರದ ಹೋಟೆಲ್ ಬಳಿ ಈ ಘಟನೆ ನಡೆದಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular