HomeLatest NewsBREAKING: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

BREAKING: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

ಚಂಡೀಗಡ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣಾದ ಕುರುಕ್ಷೇತ್ರ-ಕೈತಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಕುರುಕ್ಷೇತ್ರ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular