ಸಚಿವರ ವಿರುದ್ಧದ ಲೈಂಗಿಕ ಕಿರುಕುಳ ಕೇಸ್; ಸ್ಪೋಟಕ ಆರೋಪ ಮಾಡಿದ ಮಹಿಳಾ ಕೋಚ್

ಹರಿಯಾಣದ ಸಚಿವ ಸಂದೀಪ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಕೋಚ್ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂಡೀಗಢ ಪೊಲೀಸ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಹಿಳಾ ಕೋಚ್, ಎಸ್‌ಐಟಿ ರಚಿಸಲಾಗಿದೆ, ಎಲ್ಲವನ್ನೂ ವಿವರವಾಗಿ ಹೇಳಲಾಗಿದೆ. ಹರಿಯಾಣ ಮುಖ್ಯಮಂತ್ರಿ ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ, ಘಟನೆ ಚಂಡೀಗಢದಲ್ಲಿ ನಡೆದಿದೆ. ಮೌನವಾಗಿರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ತನಗೆ 1 ಕೋಟಿ ರೂಪಾಯಿ ಆಫರ್ ಮಾಡಿ ದೇಶವನ್ನು ತೊರೆಯುವಂತೆ ಫೋನ್ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ. ಹರಿಯಾಣ ಪೊಲೀಸರು ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕೂಡಾ ಕೋಚ್ ಆರೋಪಿಸಿದ್ದಾರೆ.

“ನಾನು ಚಂಡೀಗಢ ಪೊಲೀಸ್ ಎಸ್‌ಐಟಿಗೆ ಎಲ್ಲವನ್ನೂ ವಿವರವಾಗಿ ಹೇಳಿದ್ದೇನೆ. ನಾನು ಎಸ್‌ಐಟಿಗೆ ಬಾಕಿ ಉಳಿದಿರುವ ಸಮಸ್ಯೆಗಳನ್ನು ಸಹ ಹೇಳಿದ್ದೇನೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಕೇಳಿದ್ದೇನೆ, ಇದರಲ್ಲಿ ಮುಖ್ಯಮಂತ್ರಿಯೇ ಸಂದೀಪ್ ಸಿಂಗ್ ಅವರ ಪರವಾಗಿದ್ದಾರೆ. ಚಂಡೀಗಢ ಪೊಲೀಸರು ನನ್ನ ಮೇಲೆ ಯಾವುದೇ ಒತ್ತಡ ಹೇರಲಿಲ್ಲ. ಆದರೆ ಹರಿಯಾಣ ಪೊಲೀಸರು ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ” ಎಂದು ಮಹಿಳಾ ಕೋಚ್ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read