ವ್ಯಕ್ತಿಯ ಖಾಸಗಿ ಅಂಗ ಕಚ್ಚಿದ ನಾಯಿ; ದೊಣ್ಣೆಯಿಂದ ಶ್ವಾನವನ್ನು ಹೊಡೆದು ಕೊಂದ ಜನ

ಹರಿಯಾಣದ ಕರ್ನಾಲ್‌ನ ಬಿಜ್ನಾ ಗ್ರಾಮದಲ್ಲಿ 30 ವರ್ಷದ ಕರಣ್ ಎಂಬ ವ್ಯಕ್ತಿಯ ಮೇಲೆ ಪಿಟ್‌ಬುಲ್ ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಕರಣ್ ಅವರ ಖಾಸಗಿ ಅಂಗದ ಮೇಲೆ ನಾಯಿ ದಾಳಿ ಮಾಡಿದೆ.

ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಪಟ್ಟರೂ ಅದು ಹಿಂದೆ ಹೋಗಲಿಲ್ಲ. ಕೊನೆಗೆ ಕರಣ್ ನಾಯಿಯ ಬಾಯಿಗೆ ಬಟ್ಟೆ ಕಟ್ಟಬೇಕಾಯ್ತು.

ಘಟನೆಯಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಘರೌಂಡಾದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಅವರ ಸ್ಥಿತಿ ಗಂಭೀರವಾದ ಕಾರಣ ನಂತರ ಕರ್ನಾಲ್‌ನ ಸರ್ಕಾರಿ ಆಸ್ಪತ್ರೆಗೆ ರೆಫರ್ ಮಾಡಲಾಯಿತು.

ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪಿಟ್‌ಬುಲ್ ತಿರುಗಾಡುತ್ತಿದ್ದು, ಎರಡು ದಿನಗಳ ಹಿಂದೆಯೂ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು ಎಂದು ಸಂತ್ರಸ್ತೆಯ ಸಂಬಂಧಿಕರು ತಿಳಿಸಿದ್ದಾರೆ. ನಾಯಿಗಳ ಕಾಟದಿಂದ ಗ್ರಾಮಸ್ಥರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದರು.

ಇಂತಹ ಪರಿಸ್ಥಿತಿಯಲ್ಲಿ ಗ್ರಾಮಸ್ಥರು ಸ್ವತಃ ಕ್ರಮ ಕೈಗೊಂಡು ನಾಯಿಯನ್ನು ದೊಣ್ಣೆಯಿಂದ ಹೊಡೆದು ಸಾಯಿಸಲು ನಿರ್ಧರಿಸಿದರು.

ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು ಗಾಯಗೊಂಡ ಯುವಕ ಮತ್ತು ಆತನ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read