ಮೊಮ್ಮಗನ ಕೊಂದಿದ್ದಾರೋ, ಜೀವಂತವಾಗಿದ್ದಾನೋ ಗೊತ್ತಿಲ್ಲ: ಟೆಕ್ಕಿ ಅತುಲ್ ಸುಭಾಷ್ ತಂದೆ ಹೇಳಿಕೆ: ತಮ್ಮ ಸುಪರ್ದಿಗೆ ಕೊಡಲು ಮನವಿ

ಸಮಷ್ಠಿಪುರ್(ಬಿಹಾರ): ಬೆಂಗಳೂರಿನಲ್ಲಿ ಪತ್ನಿ ನಿಕಿತಾ ಸಿಂಘಾನಿಯಾ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಅವರ ತಂದೆ, ತಮ್ಮ ನಾಲ್ಕು ವರ್ಷದ ಮೊಮ್ಮಗನನ್ನು ಕಸ್ಟಡಿಗೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಅತುಲ್ ಸುಭಾಷ್ ಅವರ ಮಗ ನಮ್ಮ ಕುಟುಂಬಕ್ಕೆ ಸೇರುವಂತೆ ನೋಡಿಕೊಳ್ಳಿ ಎಂದು ಅತುಲ್ ಅವರ ತಂದೆ ಪವನ್ ಕುಮಾರ್ ಮೋದಿ ಅವರು ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.

ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಬೆಂಗಳೂರು ಪೊಲೀಸರು ಭಾನುವಾರ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ನಿಕಿತಾಳನ್ನು ಗುರುಗ್ರಾಮ್‌ನಿಂದ ಬಂಧಿಸಲಾಗಿದ್ದು, ಉಳಿದ ಇಬ್ಬರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಬಂಧಿಸಲಾಗಿದೆ.

ಅವಳು ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾಳೆಂದು ನಮಗೆ ತಿಳಿದಿಲ್ಲ, ಅವನು ಕೊಲ್ಲಲ್ಪಟ್ಟಿದ್ದಾನೆಯೇ ಅಥವಾ ಅವನು ಬದುಕಿದ್ದಾನೆಯೇ? ಎಂದು ಗೊತ್ತಿಲ್ಲ. ಮೊಮ್ಮಗನ ಬಗ್ಗೆ ನಮಗೆ ಏನೂ ತಿಳಿದಿಲ್ಲ, ನನ್ನ ಮೊಮ್ಮಗ ನಮ್ಮೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ ಎಂದು ಪವನ್ ಕುಮಾರ್ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ನಾನು ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಮಗನಂತೂ ಇಲ್ಲ, ನನ್ನ ಮೊಮ್ಮಗನ ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ. ಇಡೀ ಸಮಾಜ, ಜನರು ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read