ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ ? ಸಂಪುಟ ಸಭೆಯೂ ಸುರ್ಜೆವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? : R.ಅಶೋಕ್

ಬೆಂಗಳೂರು : ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೆವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ..ಹೀಗಂತ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಆರ್.ಅಶೋಕ್ ‘’ ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ. ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ
ಸುರ್ಜೆವಾಲಾ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ
ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು
RahulGandhi ಅವರಿಗೆ ಶಕ್ತಿ ಇಲ್ಲ. ಒಟ್ಟಿನಲ್ಲಿ @INCKarnataka ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ @INCIndia ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read