HomeKarnatakaBREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ಮಕ್ಕಳು. ಶಾಲೆಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ನಾಲ್ವರು ಮಕ್ಕಳು ಮುತ್ತಿಗೆ ಗ್ರಾಮದಲ್ಲಿ ಕೆರೆಗೆ ಈಜಲೆಂದು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ನೀರು ಪಾಲಾಗಿದ್ದಾರೆ.

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular