ಹಾಸನ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. 10 ಜನರು ಮೃತಪಟ್ಟಿದ್ದಾರೆ.
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕ್ಯಾಂಟರ್ ಗೆ ವಿದ್ಯಾರ್ಥಿಗಳು ಸೇರಿ 9 ಜನರು ಬಲಿಯಾಗಿದ್ದರು. ಇದೀಗ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನ್ (26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶಿವಯ್ಯನ ಕೊಪ್ಪಲು ಗ್ರಾಮದ ಯುವಕ ಚಂದನ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.