HomeKarnatakaBREAKING NEWS: ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಮಕರ ಸಂಕ್ರಾಂತಿ ದಿನದಂದೇ ಸಾಲು ಸಾಲು ಅಪಘಾತ ಘಟನೆಗಳು ನಡೆದಿವೆ. ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿಯೊಂದು ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೆ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕ್ಯಾಂಟಿನ್ ಗೆ ನುಗ್ಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular