ಹಾಸನ: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿವೆ. ಹಲವೆಡೆ ಗುಡ್ಡ ಕುಸಿತ, ಮನೆ ಗೋಡೆ ಕುಸಿತದಂತಹ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಹಾಸನದ ಆನೆಮಹಲ್ ಬಳಿ ಭೂಕುಸಿತವಾಗುತ್ತಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ಭೂಕುಸಿತವಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಕ್ಷಣ ಕ್ಷಣಕ್ಕೂ ಮಣ್ಣು ಕುಸಿದು ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವಂತೆ ಸೂಚನೆ ನೀಡಿದ್ದಾರೆ.
ಆನೆಮಹಲ್ ಬಳಿ ವಾಹನ ಸವಾರರು ಜೀವಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಧಾರಾಕಾರ ಮಳೆಯಿಂದಾಗಿ ಶಿರಾಡಿಘಾತ್ ನ ಹಲವೆಡೆ ಭೂಕುಸಿತ ಸಂಭವಿಸಿದೆ.