HomeKarnatakaBREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

BREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

ಹಾಸನ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲಿಯೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಲಾಗಿರುವ ಆರೋಪ ಕೇಳಿಬಂದಿದೆ.

ಚುನಾವಣಾ ಪ್ರಚಾರದ ವೇಳೆ 30 ಜನರಿದ್ದ ಗುಂಪು ಬಿಜೆಪಿ ವಕ್ತಾರ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಯಗೊಂಡಿರುವ ಮೂವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರೀತಮ್ ಗೌಡ ಬೆಂಬಲಿಗರಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಈರೀತಿ ಮಾಡಲಾಗಿದೆ ಎಂದು ಗಾಯಾಳುಗಳು ದೂರಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ವಕ್ತಾರ ವಿಜಾಯ್ ಕುಮಾರ್, ಪ್ರಮೋದ್, ಸಂದೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಎಸ್ ಪಿ ಮೊಹಮ್ಮದ್ ಸುಜೇತಾ, ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular