HomeKarnatakaBREAKING NEWS: ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: 10ಕ್ಕೂ ಹೆಚ್ಚು...

BREAKING NEWS: ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾಸನ: ಖಾಸಗಿ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಳಲಿ ಬೈಪಾಸ್ ನಲ್ಲಿ ನಡೆದಿದೆ.

ಬಸ್ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ನ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular