ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ. ದಡದರಹಳ್ಳಿ ನಿವಾಸಿಗಳಾದ ಸುನೀಲ್ (20) ಹಾಗೂ ಶೃಂಗಾರ್ (18) ಮೃತ ದುರ್ದೈವಿಗಳು. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

