HomeKarnatakaBIG NEWS: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದಂಪತಿ

BIG NEWS: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದಂಪತಿ

ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತು ದಂಪತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚಿಕ್ಕಟ್ಟೆಯಲ್ಲಿ ನಡೆದಿದೆ.

ರಿಜ್ವಾನ್ (31) ಹಾಗೂ ಸಿಮ್ರನ್ ಭಾನು (25) ಮೃತ ದಂಪತಿ. ಹಾಸನ ಜಿಲ್ಲೆಯ ಅಡ್ಲಿಮನೆ ರಸ್ತೆಯಲ್ಲಿರುವ ಚಿಕ್ಕಟ್ಟೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂಪತಿ ಹಾಸನ ಇಲಾಹಿ ನಗರದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಸಂಜೆ ಪತಿ ಹಾಗೂ ಪತ್ನಿ ನಡುವೆ ಜಗಳವಾಗಿತ್ತು. ಇಂದು ಬೆಳಿಗ್ಗೆ ದಂಪತಿ ಚಿಕ್ಕಟ್ಟೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular