ಹಾಸನ: ಹಾಸನ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮೊದಲ ಬಲಿಯಾಗಿದೆ. ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ಗಮನಿಸದೇ ತುಳಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆ.ಎಸ್.ಆರ್.ಟಿ.ಸಿ ನೌಕರ ನಂದೀಶ್ (41) ಮೃತ ದುರ್ದೈವಿ.
ಮುಂಜಾನೆ ವಾಕಿಂಗ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.