BIG UPDATE: ಹಾಸನದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿ ಪ್ರಕರಣ; ಶೂಟೌಟ್ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಮತ್ತೋರ್ವ ವ್ಯಕ್ತಿ ಮೇಲೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಹಾಸನದ ಹೊಯ್ಸಳನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಒಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿ ಮತ್ತೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓರ್ವನ ಮೃತದೇಹ ಕಾರಿನ ಮುಂಭಾಗದ ಸೀಟ್ ನಲ್ಲಿ ಪತ್ತೆಯಾಗಿದ್ದು, ಇನ್ನೋರ್ವನ ಮೃತದೇಹ ಕಾರಿನ ಎದುರಲ್ಲಿ ರಸ್ತೆಯಲ್ಲಿ ಪತ್ತೆಯಾಗಿದೆ.

ಮೃತರನ್ನು ಹಾಸನದ ಶರಾಫತ್ ಅಲಿ ಹಾಗೂ ಬೆಂಗಳೂರಿನ ಆಸಿಫ್ ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರವಾಗಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಎಸ್ ಪಿ ಮೊಹಮ್ಮದ್ ಸುಜೇತಾ, ಬೆರಳಚ್ಚು ತಜ್ಞರು, ಎಫ್ ಎಸ್ ಎಲ್ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read