HomeKarnatakaBREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

BREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತೋರ್ವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ೩೫ ವರ್ಷದ ಚೇತನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಿಕ್ಕೇರಿ ಮೂಲದ ಚೇತನ್ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.

ಅಂಗಡಿ ಬಾಗಿಲು ಹಾಕಿ ರಾತ್ರಿ ಮನೆಗೆ ಬಂದ ಚೇತನ್ ಪತ್ನಿ ಹಾಗೂ ಮಗುವಿನೊಂದಿಗೆ ಊಟಕ್ಕೆ ಕುಳಿತಿದ್ದರು. ಈ ವೇಳೆ ಚೇತನ್ ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕೆಳಗೆ ಕುಳಿತಿದ್ದವರು ಮೇಲೆ ಏಳಲಾಗದೇ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚೇತನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular