HomeKarnatakaBIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ.

ದರ್ಶನ್ ಕುಮಾರ್ (29) ಮೃತ ದುರ್ದೈವಿ. ವಸಂತಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು. ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದರು. ಕೆರೆ ಕೋಡಿ ಕೆಲಸ ಮಾಡುತ್ತಿದ್ದಗ ಏಕಾಏಕಿ ಮಣ್ಣು ಕುಸಿದು ಬಿದ್ದಿದ್ದು, ಮಣ್ಣಿನ ಅವಶೇಷಗಳ ಅಡಿ ಸಿಲುಕಿ ದರ್ಶನ್ ಕುಮಾರ್ ಸಾವನ್ನಪ್ಪಿದ್ದಾರೆ. ಮಣ್ಣಿನಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular