ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ-ಮೈಸೂರು ಹೆದ್ದಾರಿಯಲ್ಲಿ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಹೊಳೆನರಸೀಪುರದ ಅಂಬೇಡ್ಕರ್ ನಗರ ನಿವಾಸಿ ಮಣಿ ಕೊಲೆಯಾಗಿರುವ ವ್ಯಕ್ತಿ. ಕೊಲೆ ಬಳಿಕ ಮೃತದೇಹ ಹಾಗೂ ಅದರ ಪಕ್ಕದಲ್ಲಿರುವ ಬೈಕ್ ಮೇಲೆ ಸೊಪ್ಪು ಮುಚ್ಚಿ ಆರೋಪಿಗಳು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹಳ್ಳಿ ಮೈಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.