HomeKarnatakaBIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.

ರೌಡಿ ಶೀಟರ್ ಮಧು ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಲ್ಳಲು ಆತ ಯತ್ನಿಸಿದ್ದ. ಈ ವೇಳೆ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಸೆ.14ರಂದು ಮಧು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಾಟರ್ ಮೆನ್ ಗಣೇಶ್ ನನ್ನು ಕೊಲೆ ಮಾಡಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ. ಇಂದು ಹಬ್ಬಕ್ಕೆಂದು ಅರೇಹಳ್ಳಿಗೆ ಮಧು ಬಂದಿದ್ದ. ಖಚಿತ ಮಾಹಿತಿ ಪಡೆದು ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಮಧು ಡ್ರ್ಯಾಗನ್ ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಶರಣಾಗುವಂತೆ ಹೇಳಿದರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ತಕ್ಷಣ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular