HomeKarnatakaಶಕ್ತಿ ಸದನ ಕೇಂದ್ರದಿಂದ ಇಬ್ಬರು ಬಾಂಗ್ಲಾದೇಶದ ಮಹಿಳೆಯರು ಪರಾರಿ

ಶಕ್ತಿ ಸದನ ಕೇಂದ್ರದಿಂದ ಇಬ್ಬರು ಬಾಂಗ್ಲಾದೇಶದ ಮಹಿಳೆಯರು ಪರಾರಿ

ಹಾಸನ: ಶಕ್ತಿ ಸದನ ಕೇಂದ್ರದಿಂದ ಇಬ್ಬರು ಬಾಂಗ್ಲಾದೇಶದ ಮಹಿಳೆಯರು ಪರಾರಿಯಾಗಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂನಲ್ಲಿ ನಡೆದಿದೆ.

ಸೀಲಾಶೇಖ್‌ (34) ಹಾಗೂ ಸ್ವೀಟಿ ಮೊಂಡಾಲ್‌ (27) ಪರಾರಿಯಾಗಿರುವ ಮಹಿಳೆಯರು. ವೇಶ್ಯಾವಾಟಿಕೆ ಪ್ರಕರಣದ ಸಂಬಂಧ ಹಾಸನ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಇವರನ್ನು ವಶಕ್ಕೆ ಪಡೆದು ಕಳೆದ ನಾಲ್ಕು ತಿಂಗಳಿನಿಂದ ಶಕ್ತಿ ಸದನ ಕೇಂದ್ರದಲ್ಲಿ ಇರಿಸಿದ್ದರು.

ಇವರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದರು. ಮೇ 5ರಂದು ರಾತ್ರಿ ಸುಮಾರು 8:50ರ ವೇಳೆಗೆ ಇಬ್ಬರು ಮಹಿಳೆಯರು ಊಟ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕೊಠಡಿಯಿಂದ ಹೊರಬಂದು ಕೇಂದ್ರದ ಮುಂಭಾಗದ ಗೇಟ್ ಮೇಲಿಂದ ಹಾರಿ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಮಹಿಳೆಯರಿಗಾಗಿ ಎಲ್ಲೆಡೆ ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular