HomeUncategorizedನಟ ಯಶ್ ತಾಯಿ ಪುಷ್ಪಾ ನಿವೇಶನ ವಿವಾದಕ್ಕೆ ಹೊಸ ಟ್ವಿಸ್ಟ್: ಸೈಟ್​​ನ ಮೂಲ ಮಾಲಕಿ ಪ್ರತ್ಯಕ್ಷ

ನಟ ಯಶ್ ತಾಯಿ ಪುಷ್ಪಾ ನಿವೇಶನ ವಿವಾದಕ್ಕೆ ಹೊಸ ಟ್ವಿಸ್ಟ್: ಸೈಟ್​​ನ ಮೂಲ ಮಾಲಕಿ ಪ್ರತ್ಯಕ್ಷ

ಹಾಸನ: ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅಅವರ ಹಾಸನದಲ್ಲಿನ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಸೈಟ್ ನ ಮೂಲ ಮಾಲಕಿ ಪ್ರತ್ಯಕ್ಷವಾಗಿದ್ದಾರೆ. ಈ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರ ಹಾಸನದ ನಿವೇಶನ ವಿವಾದ ಹಲವು ದಿನಗಳಿಂದ ನಡೆಯುತ್ತಿದ್ದರೂ ಈವರೆಗೆ ಸುಮ್ಮನಿದ್ದ ಮೂಲ ಸೈಟ್ ಮಾಲಕಿ ಲಕ್ಷ್ಮಮ್ಮ ಈಗ ಪ್ರತ್ಯಕ್ಷವಾಗಿದ್ದು, ಕೆಲ ಹೇಳಿಕೆಗಳನ್ನು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಷ್ಪ ಅರುಣ್ ಕುಮಾರ್ ಅವರ ಜಾಗ ಬೇರೆ ಕಡೆ ಇದೆ. ನಮ್ಮ ಜಾಗದಲ್ಲಿ ಕಾಂಪೌಂಡ್ ಕಟ್ಟಿಸಿದ್ದರು. ಅದನ್ನು ತೆಗೆಸಿದ್ದೇವೆ ಎಂದು ಲಕ್ಷ್ಮಮ್ಮ ಅವರು ಹೇಳಿದ್ದಾರೆ. ಸದ್ಯಕ್ಕೆ ಲಕ್ಷ್ಮಮ್ಮ ಅವರು ಮೈಸೂರಿನಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

ನನಗೆ 93 ವರ್ಷ. ನಾನು ಮೈಸೂರಿನಲ್ಲಿ ಇರುವುದು. ಹಾಸನಕ್ಕೆ ಹೋಗಿ ಬರುವುದು ನನಗೆ ಕಷ್ಟವಾಗುತ್ತದೆ ಎಂದು ದೇವರಾಜ್ ಅವರಿಗೆ ಜಿಪಿಎ ಹೋಲ್ಡರ್ ಮಾಡಿದ್ದೇನೆ. ಪುಷ್ಪಾ ಅವರ ಜಾಗಕ್ಕೂ ನಮಗೂ ಸಂಬಂಧವೇ ಇಲ್ಲ. ಅವರದ್ದು ಆ ರಸ್ತೆಯಲ್ಲಿದೆ, ನಮ್ಮದು ಈ ರಸ್ತೆಯಲ್ಲಿದೆ. ಯಶ್ ತಾಯಿ ಅಲ್ಲಿಗೆ ಯಾಕೆ ಹೋಗುತ್ತಾರೆ ಅಂತ ಗೊತ್ತಿಲ್ಲ ಎಂದಿದ್ದಾರೆ.

ಲಕ್ಷ್ಮಮ್ಮ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯಶ್ ತಾಯಿ ಪುಷ್ಪಾ, ಲಕ್ಷ್ಮಮ್ಮ ಎಂಬುವವರು ಇದ್ದಾರೆ ಎಂಬುದನ್ನು ಕೇಳಿ ತಿಳಿದಿದ್ದೆ. ದಾಖಲೆ ತೆಗೆದಾಗ ಲಕ್ಷ್ಮಮ್ಮ ಅವರಿಂದ ಬೇರೆಯವರಿಗೆ ಹಸ್ತಾಂತರ ಆಗಿ 45 ವರ್ಷಗಳು ಕಳೆದಿವೆ. ಈಗ ಅವರನ್ನು ಟಿವಿಯಲ್ಲಿ ನೋಡಿದೆ. ಖಾತೆ ಮಾಡಿರುವುದು ನಾನು, ಕಂದಾಯ ಕಟ್ಟಿರುವುದು ನಾನು. ಅವರ ಹೆಸರಿನಲ್ಲಿ ಯಾಕೆ ಕಂದಾಯ ಬಂದಿಲ್ಲ? ದೇವರಾಜ್ ಅವರ ಜೊತೆ ಲಕ್ಷ್ಮಮ್ಮ ಅವರು ಭಾಗಿ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಹೊರಗೆ ಬರುತ್ತದೆ ಎಂದಿದ್ದಾರೆ.

ಹಿಂದೆ ಇರುವ ಎರಡು ಸೈಟ್​​ಗಳಿಗೂ ಇದೇ ರೀತಿ ಮಾಡಿದ್ದಾರೆ. ಸತೀಶ್ ಪಟೇಲ್, ಲಾಯರ್ ಶೇಖರ್, ಡಿಪಿಒ ನಟರಾಜ್, ದೇವರಾಜೇಗೌಡ ಎಲ್ಲರೂ ಸೇರಿ ಹಾಸನದಲ್ಲಿ ಈ ರೀತಿ ದಂಧೆ ಮಾಡಿದ್ದಾರೆ. ಇದನ್ನು ನಾನು ಬಯಲಿಗೆ ಎಳೆಯುತ್ತೇವೆ. ಪ್ರತಿಯೊಬ್ಬರಿಗೂ ತೊಂದರೆ ಆಗಿದೆ ಅಂತ ಜನರು ನನಗೆ ಮಾಹಿತಿ ಕೊಡುತ್ತಿದ್ದಾರೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular