ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಹಸನ ಜಿಲ್ಲೆಯ ಉದ್ದೂರು ಗ್ರಾಮದಲ್ಲಿ ನಡೆದಿದೆ.
18 ವರ್ಷದ ಪ್ರಜ್ವಲ್ ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರೊಂದಿಗೆ ಉದ್ದೂರು ಕೆರೆಗೆ ಈಜಲು ಹೋಗಿದ್ದ. ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಇಳಿದಿದ್ದರು. ಉಳಿದವರು ದಡದಲ್ಲಿಯೇ ಇದ್ದರು. ಪ್ರಜ್ವಲ್ ಈಜುತ್ತಾ ಹೋದವನು ವಾಪಸ್ ಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಘಟನ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಮುಳುಗಿದ್ದ ಪ್ರಜ್ವಲ್ ಮೃತದೇಹವನ್ನು ಹೊರತೆಗೆದಿದ್ದಾರೆ. ಪೆನ್ಶೆನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

