HomeKarnatakaBIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕ

BIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಹಾಸನ: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಲಾಡ್ಜ್ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯ ಗೋಕುಲ್ ಲಾಡ್ಜ್ ನಲ್ಲಿ ನಡೆದಿದೆ.

ರಂಗಸ್ವಾಮಿ (57) ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ರಂಗಸ್ವಾಮಿ ನಿನ್ನೆ ಗೋಕುಲ್ ಲಾಡ್ಜ್ ನಲ್ಲಿ ರೂಂ ಪಡೆದು ವಾಸವಾಗಿದ್ದರು.

ಇಂದು ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇತ್ತು. ರಂಗಸ್ವಾಮಿಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular