HomeKarnatakaBIG NEWS: ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ನೊಂದ ಮಹಿಳೆ ಆತ್ಮಹತ್ಯೆ

BIG NEWS: ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ನೊಂದ ಮಹಿಳೆ ಆತ್ಮಹತ್ಯೆ

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.

ಧನಶ್ರೀ (20) ಮೃತ ಮಹಿಳೆ. ಸಕಲೇಶಪುರ ಬ್ಯಾಕೆರೆಗಡಿ ಗ್ರಾಮದವರು. ಧನಶ್ರೀ ಎರಡು ವರ್ಷಗಳ ಹಿಂದೆ ಪ್ರೇಮ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿದ್ದಳು. ಕಳೆದ ಒಂದು ವರ್ಷದಿಂದ ಪ್ರೇಮ್ ಕುಮಾರ್ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ನೊಂದು ತವರು ಮನೆಗೆ ಹೋಗಿದ್ದ ಧನ್ಯಶ್ರೀ ಎರಡು ದಿನಗಳ ಹಿಂದೆ ಮತ್ತೆ ಪತಿಯ ಮನೆಗೆ ವಾಪಾಸ್ ಆಗಿದ್ದಳು.

ಈ ವೇಳೆ ಪತಿ ಹಾಗೂ ಅತ್ತೆ ವರದಕ್ಷಿಣೆ ತಂದಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪತ್ನಿಹಾಗೂ ಅತ್ತೆ ಭವಾನಿ, ಮಾವ ಪ್ರದೀಪ್ ಎಲ್ಲರೂ ಸೇರಿ ಧನ್ಯಶ್ರೀ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ತೀವ್ರವಾಗಿ ನೊಂದ ಧನ್ಯಶ್ರೀ ಮನೆಯಲ್ಲಿ ನೇನು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular